ವಿಷಯಕ್ಕೆ ಹೋಗಿ

ವೈಶಿಷ್ಟ್ಯವಾಗಿರುವುದು

ಮತ್ತೊಂದು ವಿಶೇಷ ದಾಖಲೆ ಸನಿಹದಲ್ಲಿದ್ದಾರೆ ಕಿಂಗ್ ಕೊಹ್ಲಿ!

ಕ್ರಿಕೆಟ್ ಲೋಕದ ಕಿಂಗ್ ಅಂತಲೇ ಕರೆಯಲ್ಪಡುತ್ತಿರುವ ವಿರಾಟ್ ಕೊಹ್ಲಿ ತನ್ನ ಹೆಸರಿನಲ್ಲಿ ಹಲವಾರು ದಾಖಲೆಗಳನ್ನು ನಿರ್ಮಿಸಿದ್ದಾರೆ. ಅದ್ಯಾವುದೇ ಸರಣಿಯಿರಲಿ, ಪಂದ್ಯವಿರಲಿ; ಕೊಹ್ಲಿ ಹೆಸರಿನಲ್ಲಿ ಒಂದಿಲ್ಲೊಂದು ದಾಖಲೆಗಳು ನಿರ್ಮಾಣವಾಗುತ್ತಲೇಯಿವೆ. ಈಗ ಕೊಹ್ಲಿ ಮತ್ತೊಂದು ವಿಶೇಷ ದಾಖಲೆಗೆ ಬಹಳ ಸನಿಹದಲ್ಲಿದ್ದಾರೆ. ಕಳೆದ ವರ್ಷ ವಿಶ್ವಕಪ್ ವೇಳೆ ಮಾಸ್ಟರ್ ಬ್ಲಾಸ್ಟರ್ ಸಚಿನ್ ತೆಂಡೂಲ್ಕರ್ ಹೆಸರಿನಲ್ಲಿದ್ದ ದಾಖಲೆಯೊಂದನ್ನು ಕೊಹ್ಲಿ ಧೂಳೀಪಟಗೊಳಿಸಿದ್ದರು. ಏಕದಿನ ವಿಶ್ವಕಪ್ ನಲ್ಲಿ 50ನೇ ಶತಕ ಸಿಡಿಸಿದ್ದ ಕೊಹ್ಲಿ, ಸಚಿನ್ ಅವರ ಹೆಸರಿನಲ್ಲಿದ್ದ 49 ಏಕದಿನ ಶತಕಗಳ ದಾಖಲೆಯನ್ನು ಹಿಂದಿಕ್ಕಿದ್ದರು. ಇನ್ನು ಜನವರಿ 25ರಿಂದ ಆರಂಭಗೊಳ್ಳಲಿರುವ ಇಂಗ್ಲೆಂಡ್ ವಿರುದ್ಧದ ಟೆಸ್ಟ್ ಸರಣಿಯ ವೇಳೆ ಮತ್ತೊಂದು ದಾಖಲೆ ನಿರ್ಮಿಸಲು ಕೊಹ್ಲಿ ಮುಂದಾಗಿದ್ದಾರೆ. ಜನವರಿ 25ರಿಂದ ಭಾರತದಲ್ಲಿ ಇಂಗ್ಲೆಂಡ್ ಮತ್ತು ಆತಿಥೇಯ ಭಾರತದ ಮಧ್ಯೆ 5 ಪಂದ್ಯಗಳ ಟೆಸ್ಟ್ ಸರಣಿ ಆರಂಭವಾಗಲಿದೆ. ಈ ಟೆಸ್ಟ್ ಸರಣಿಯ ವೇಳೆ ಕೊಹ್ಲಿಯೇನಾದ್ರೂ 152 ರನ್ ಬಾರಿಸಿದ್ರೆ ಟೆಸ್ಟ್ ವೃತ್ತಿ ಬದುಕಿನಲ್ಲಿ 9,000 ರನ್ ಮೈಲಿಗಲ್ಲು ಸ್ಥಾಪಿಸಿದ ಸಾಧನೆಗೆ ಕಿಂಗ್ ಕೊಹ್ಲಿ ಪಾತ್ರರಾಗಲಿದ್ದಾರೆ. ಸದ್ಯ 113 ಟೆಸ್ಟ್ ಪಂದ್ಯಗಳನ್ನಾಡಿರುವ ಕೊಹ್ಲಿ 30 ಅರ್ಧ ಶತಕ, 29 ಶತಕ ಮತ್ತು 7 ದ್ವಿಶತಕಗಳ ಸಹಿತ ಒಟ್ಟು 8,848 ರನ್ ಬಾರಿಸಿದ್ದಾರೆ. ಅಂದ್ಹಾಗೆ ಭಾರತ ಮತ್ತು ಇಂಗ್ಲೆಂಡ್ ನಡುವಿನ 5 ಪಂದ್ಯಗ...

ಪ್ರಳಯ ಆಗುತ್ತೆ..! (ಕವನ ಕಾಲಂ)

ಒಂದು ದಿನ
ವಟಗುಟ್ಟೋ ಕಪ್ಪೆ
ಉಪ್ಪು ನೀರಲ್ಲಿ
ಕೊಚ್ಚಿ ಹೋಗುತ್ತೆ

ಎಕರೆ ಪ್ಲಾಂಟೇಶನ್ನು
ಐಫೆಲ್ ಟವರ್ರು
ಹೈಫೈ ಹೋಟೆಲ್ಲು
ಎಲ್ಲಾ ಮಣ್ಣುಪಾಲಾಗುತ್ತೆ

ಭತ್ತದ ಗದ್ದೆ
ಸುಟ್ಟು ಹೋಗುತ್ತೆ
ಬೆಟ್ಟ ಗಾತ್ರದ ಕಟ್ಟಡ
ಮುರಿದು ಬೀಳುತ್ತೆ

ಸಮುದ್ರ ಕೆರಳಿ
ಕೊಲ್ಲಲು ಶುರುಮಾಡುತ್ತೆ
ಭೂಮಿ ನಡುಗಿ
ನುಂಗಲು ಬಾಯ್ದೆರೆಯುತ್ತೆ

ಕಸ ಕಡ್ಡಿ ಗುಡಮರ
ತರಗೆಲೆ ಕಲ್ಲುಬಂಡೆ
ಮನುಷ್ಯನ ಹೆಣಗಳೆಲ್ಲಾ
ಮಿಕ್ಸ್ ಮಿಕ್ಸ್ ಆಗುತ್ತೆ

ಮನುಷ್ಯನ ದುರಾಸೆ
ಹೀಗೇ ಮುಂದುವರೆದರೆ
ಜಗತ್ತೇ ಅಂತ್ಯಗೊಳ್ಳುತ್ತೆ;
ಇಂದಲ್ಲ ನಾಳೆ..!

-ಸದಾ ಸಕಲೇಶಪುರ.

ಕಾಮೆಂಟ್‌ಗಳು

ಪ್ರಚಲಿತ ಪೋಸ್ಟ್‌ಗಳು