ವಿಷಯಕ್ಕೆ ಹೋಗಿ

ವೈಶಿಷ್ಟ್ಯವಾಗಿರುವುದು

ಮತ್ತೊಂದು ವಿಶೇಷ ದಾಖಲೆ ಸನಿಹದಲ್ಲಿದ್ದಾರೆ ಕಿಂಗ್ ಕೊಹ್ಲಿ!

ಕ್ರಿಕೆಟ್ ಲೋಕದ ಕಿಂಗ್ ಅಂತಲೇ ಕರೆಯಲ್ಪಡುತ್ತಿರುವ ವಿರಾಟ್ ಕೊಹ್ಲಿ ತನ್ನ ಹೆಸರಿನಲ್ಲಿ ಹಲವಾರು ದಾಖಲೆಗಳನ್ನು ನಿರ್ಮಿಸಿದ್ದಾರೆ. ಅದ್ಯಾವುದೇ ಸರಣಿಯಿರಲಿ, ಪಂದ್ಯವಿರಲಿ; ಕೊಹ್ಲಿ ಹೆಸರಿನಲ್ಲಿ ಒಂದಿಲ್ಲೊಂದು ದಾಖಲೆಗಳು ನಿರ್ಮಾಣವಾಗುತ್ತಲೇಯಿವೆ. ಈಗ ಕೊಹ್ಲಿ ಮತ್ತೊಂದು ವಿಶೇಷ ದಾಖಲೆಗೆ ಬಹಳ ಸನಿಹದಲ್ಲಿದ್ದಾರೆ. ಕಳೆದ ವರ್ಷ ವಿಶ್ವಕಪ್ ವೇಳೆ ಮಾಸ್ಟರ್ ಬ್ಲಾಸ್ಟರ್ ಸಚಿನ್ ತೆಂಡೂಲ್ಕರ್ ಹೆಸರಿನಲ್ಲಿದ್ದ ದಾಖಲೆಯೊಂದನ್ನು ಕೊಹ್ಲಿ ಧೂಳೀಪಟಗೊಳಿಸಿದ್ದರು. ಏಕದಿನ ವಿಶ್ವಕಪ್ ನಲ್ಲಿ 50ನೇ ಶತಕ ಸಿಡಿಸಿದ್ದ ಕೊಹ್ಲಿ, ಸಚಿನ್ ಅವರ ಹೆಸರಿನಲ್ಲಿದ್ದ 49 ಏಕದಿನ ಶತಕಗಳ ದಾಖಲೆಯನ್ನು ಹಿಂದಿಕ್ಕಿದ್ದರು. ಇನ್ನು ಜನವರಿ 25ರಿಂದ ಆರಂಭಗೊಳ್ಳಲಿರುವ ಇಂಗ್ಲೆಂಡ್ ವಿರುದ್ಧದ ಟೆಸ್ಟ್ ಸರಣಿಯ ವೇಳೆ ಮತ್ತೊಂದು ದಾಖಲೆ ನಿರ್ಮಿಸಲು ಕೊಹ್ಲಿ ಮುಂದಾಗಿದ್ದಾರೆ. ಜನವರಿ 25ರಿಂದ ಭಾರತದಲ್ಲಿ ಇಂಗ್ಲೆಂಡ್ ಮತ್ತು ಆತಿಥೇಯ ಭಾರತದ ಮಧ್ಯೆ 5 ಪಂದ್ಯಗಳ ಟೆಸ್ಟ್ ಸರಣಿ ಆರಂಭವಾಗಲಿದೆ. ಈ ಟೆಸ್ಟ್ ಸರಣಿಯ ವೇಳೆ ಕೊಹ್ಲಿಯೇನಾದ್ರೂ 152 ರನ್ ಬಾರಿಸಿದ್ರೆ ಟೆಸ್ಟ್ ವೃತ್ತಿ ಬದುಕಿನಲ್ಲಿ 9,000 ರನ್ ಮೈಲಿಗಲ್ಲು ಸ್ಥಾಪಿಸಿದ ಸಾಧನೆಗೆ ಕಿಂಗ್ ಕೊಹ್ಲಿ ಪಾತ್ರರಾಗಲಿದ್ದಾರೆ. ಸದ್ಯ 113 ಟೆಸ್ಟ್ ಪಂದ್ಯಗಳನ್ನಾಡಿರುವ ಕೊಹ್ಲಿ 30 ಅರ್ಧ ಶತಕ, 29 ಶತಕ ಮತ್ತು 7 ದ್ವಿಶತಕಗಳ ಸಹಿತ ಒಟ್ಟು 8,848 ರನ್ ಬಾರಿಸಿದ್ದಾರೆ. ಅಂದ್ಹಾಗೆ ಭಾರತ ಮತ್ತು ಇಂಗ್ಲೆಂಡ್ ನಡುವಿನ 5 ಪಂದ್ಯಗ...

ಇವರಿಗೆ ಕಣ್ಣು ಸೊಟ್ಟಗಿದ್ದರೇನೇ ಸುಲಕ್ಷಣವಂತೆ! (ಗೊತ್ತಾ ವಿಷ್ಯಾ?!)

ಗೋಳ ವಿಜ್ಞಾನದಲ್ಲಿ ಮುಂದುವರೆದಿದ್ದ ಮಾಯಾನ್ನರಿಗೆ ನಾವಿಂದು ಬಳಸುತ್ತಿರುವ ಕೆಲವು ಮೂಲಭೂತ ಸಂಗತಿಗಳ ಪರಿಚಯ ಇರಲಿಲ್ಲ ಎಂಬುದು ಅಚ್ಚರಿಯಾದರೂ ಸತ್ಯ. ಅವರಿಗೆ ಚಕ್ರಗಳ ಬಳಕೆಯ ಬಗ್ಗೆ ತಿಳಿದಿರಲಿಲ್ಲ. 

ತಮ್ಮ ಎಲ್ಲಾ ಕೆಲಸಗಳನ್ನೂ ಅವರು ಬಂಡಿಯ ಉಪಯೋಗವಿಲ್ಲದೆಯೇ ಮಾಡುತ್ತಿದ್ದರು. ಕಟ್ಟಡಗಳಿಗೆ ಬೇಕಾದ ದೊಡ್ಡ ಕಲ್ಲುಗಳನ್ನು ಹೇಗೆ ಸಾಗಿಸುತ್ತಿದ್ದ ಎಂಬುದು ಇನ್ನೂ ಪತ್ತೆಯಾಗಿಲ್ಲ. ಇದಲ್ಲದೆ ಮಾಯನ್ನರು ತಮ್ಮ ದೈಹಿಕ ಲಕ್ಷಣಗಳಿಗೆ ವಿಪರೀತ ಮಹತ್ವ ಕೊಡುತ್ತಿದ್ದರು ಅನ್ನೋದನ್ನು ಅವರ ಬರಹಗಳೇ ಹೇಳುತ್ತವೆ.


ಹಣೆ ಚಪ್ಪಟೆಯಾಗಿರಲಿ ಎಂದು ಮಕ್ಕಳ ಹಣೆಗೆ ಮರದ ದಬ್ಬೆ ಕಟ್ಟುತ್ತಿದ್ದರಂತೆ. ಕಣ್ಣಿನ ಗೋಲಿಗಳು ನೇರವಾಗಿರದೆ ಸೊಟ್ಟವಾದ್ದರೆ ಸುಲಕ್ಷಣ ಎಂಬ ವಿಚಿತ್ರ ನಂಬಿಕೆ ಮಾಯನ್ನರಿಗಿತ್ತು. ಸಮಾಜದ ಉನ್ನತ ಸ್ಥಾನದಲ್ಲಿದ್ದ ವ್ಯಕ್ತಿಗಳು ತಮ್ಮ ಮೂಗನ್ನು ಗಿಳಿ ಮೂಗಿನಂತೆ ಬಾಗಿಸಿಕೊಳ್ಳುತ್ತಿದ್ದರು. ಹಾಗೆ ಮೂಗನ್ನು ಬಾಗಿಸಿಕೊಳ್ಳಲಿಕ್ಕೆ ಅದೇನು ಸರ್ಕಸ್ಸು ಮಾಡುತ್ತಿದ್ದರೋ ಅದು ಮಾತ್ರ ಆ ದೇವರಿಗೇ ಗೊತ್ತು!

ಕಾಮೆಂಟ್‌ಗಳು

ಪ್ರಚಲಿತ ಪೋಸ್ಟ್‌ಗಳು