ವಿಷಯಕ್ಕೆ ಹೋಗಿ

ವೈಶಿಷ್ಟ್ಯವಾಗಿರುವುದು

ಮತ್ತೊಂದು ವಿಶೇಷ ದಾಖಲೆ ಸನಿಹದಲ್ಲಿದ್ದಾರೆ ಕಿಂಗ್ ಕೊಹ್ಲಿ!

ಕ್ರಿಕೆಟ್ ಲೋಕದ ಕಿಂಗ್ ಅಂತಲೇ ಕರೆಯಲ್ಪಡುತ್ತಿರುವ ವಿರಾಟ್ ಕೊಹ್ಲಿ ತನ್ನ ಹೆಸರಿನಲ್ಲಿ ಹಲವಾರು ದಾಖಲೆಗಳನ್ನು ನಿರ್ಮಿಸಿದ್ದಾರೆ. ಅದ್ಯಾವುದೇ ಸರಣಿಯಿರಲಿ, ಪಂದ್ಯವಿರಲಿ; ಕೊಹ್ಲಿ ಹೆಸರಿನಲ್ಲಿ ಒಂದಿಲ್ಲೊಂದು ದಾಖಲೆಗಳು ನಿರ್ಮಾಣವಾಗುತ್ತಲೇಯಿವೆ. ಈಗ ಕೊಹ್ಲಿ ಮತ್ತೊಂದು ವಿಶೇಷ ದಾಖಲೆಗೆ ಬಹಳ ಸನಿಹದಲ್ಲಿದ್ದಾರೆ. ಕಳೆದ ವರ್ಷ ವಿಶ್ವಕಪ್ ವೇಳೆ ಮಾಸ್ಟರ್ ಬ್ಲಾಸ್ಟರ್ ಸಚಿನ್ ತೆಂಡೂಲ್ಕರ್ ಹೆಸರಿನಲ್ಲಿದ್ದ ದಾಖಲೆಯೊಂದನ್ನು ಕೊಹ್ಲಿ ಧೂಳೀಪಟಗೊಳಿಸಿದ್ದರು. ಏಕದಿನ ವಿಶ್ವಕಪ್ ನಲ್ಲಿ 50ನೇ ಶತಕ ಸಿಡಿಸಿದ್ದ ಕೊಹ್ಲಿ, ಸಚಿನ್ ಅವರ ಹೆಸರಿನಲ್ಲಿದ್ದ 49 ಏಕದಿನ ಶತಕಗಳ ದಾಖಲೆಯನ್ನು ಹಿಂದಿಕ್ಕಿದ್ದರು. ಇನ್ನು ಜನವರಿ 25ರಿಂದ ಆರಂಭಗೊಳ್ಳಲಿರುವ ಇಂಗ್ಲೆಂಡ್ ವಿರುದ್ಧದ ಟೆಸ್ಟ್ ಸರಣಿಯ ವೇಳೆ ಮತ್ತೊಂದು ದಾಖಲೆ ನಿರ್ಮಿಸಲು ಕೊಹ್ಲಿ ಮುಂದಾಗಿದ್ದಾರೆ. ಜನವರಿ 25ರಿಂದ ಭಾರತದಲ್ಲಿ ಇಂಗ್ಲೆಂಡ್ ಮತ್ತು ಆತಿಥೇಯ ಭಾರತದ ಮಧ್ಯೆ 5 ಪಂದ್ಯಗಳ ಟೆಸ್ಟ್ ಸರಣಿ ಆರಂಭವಾಗಲಿದೆ. ಈ ಟೆಸ್ಟ್ ಸರಣಿಯ ವೇಳೆ ಕೊಹ್ಲಿಯೇನಾದ್ರೂ 152 ರನ್ ಬಾರಿಸಿದ್ರೆ ಟೆಸ್ಟ್ ವೃತ್ತಿ ಬದುಕಿನಲ್ಲಿ 9,000 ರನ್ ಮೈಲಿಗಲ್ಲು ಸ್ಥಾಪಿಸಿದ ಸಾಧನೆಗೆ ಕಿಂಗ್ ಕೊಹ್ಲಿ ಪಾತ್ರರಾಗಲಿದ್ದಾರೆ. ಸದ್ಯ 113 ಟೆಸ್ಟ್ ಪಂದ್ಯಗಳನ್ನಾಡಿರುವ ಕೊಹ್ಲಿ 30 ಅರ್ಧ ಶತಕ, 29 ಶತಕ ಮತ್ತು 7 ದ್ವಿಶತಕಗಳ ಸಹಿತ ಒಟ್ಟು 8,848 ರನ್ ಬಾರಿಸಿದ್ದಾರೆ. ಅಂದ್ಹಾಗೆ ಭಾರತ ಮತ್ತು ಇಂಗ್ಲೆಂಡ್ ನಡುವಿನ 5 ಪಂದ್ಯಗ...

ಸ್ಪಂಜುಗಳೆಂದು ಅಲ್ಲಗೆಳೆಯುವಂತಿಲ್ಲ, ಸ್ಪಂಜಿನೊಳಗೂ ಸ್ಪೆಶಲ್ ಇದೆ!

ಸಾಗರದಾಳದಲ್ಲಿ ಕಂಡುಬರುವ ಸ್ಪಂಜುಗಳು ಬರೀ ಕಣ್ಣಿಗೆ ಆಕರ್ಷಕವಾಗಿ ಕಾಣಿಸುವುದಲ್ಲ, ಸ್ಪಂಜುಗಳು ಆಕರ್ಷಕವಾಗಿ ಕಾಣುವುದಷ್ಟೇ ಅಲ್ಲದೆ ಅವುಗಳಿಗೆ ಕೆಲವೊಂದು ವಿಶೇಷ ಗುಣಗಳಿವೆ. ಅಷ್ಟೇ ಅಲ್ಲ, ಸ್ಪಂಜುಗಳಿಗೆ ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಭರ್ಜರಿ ಬೇಡಿಕೆಯೂ ಇದೆ.

ಸ್ಪಂಜುಗಳಲ್ಲಿ ಲಿಂಗ ಮತ್ತು ನಿರ್ಲಿಂಗ ರೀತಿಯ ಸಂತಾನೋತ್ಪತ್ತಿ ವಿಧಾನಗಳು ಕಂಡುಬರುತ್ತವೆ. ಸಿಹಿ ನೀರಿನಲ್ಲಿ ವಾಸಿಸುವ ಸ್ಪಂಜುಗಳಲ್ಲಿ ನಿಲರ್ಿಂಗ ರೀತಿಯ ಸಂತಾನೋತ್ಪತ್ತಿಯು ಜೆಮ್ಯೂಲ್ಗಳೆಂಬ ರಚನೆಗಳ ಮೂಲಕ ನಡೆಯುತ್ತವೆ.

ಉಪ್ಪು ನೀರಿನಲ್ಲಿ ಕಂಡುಬರುವ ಸ್ಪಂಜುಗಳಲ್ಲಿ ಲೈಂಗಿಕ ರೀತಿಯ ಸಂತಾನೋತ್ಪತ್ತಿ ಕಂಡುಬರುತ್ತದೆ. ಇವುಗಳಲ್ಲಿ ಸಂತಾನೋತ್ಪತ್ತಿಯು ಪುರುಷಾಣು ಮತ್ತು ಅಂಡಾಣುಗಳ ಉತ್ಪತ್ತಿ ಮತ್ತು ನಿಶೇಚನದಿಂದ ನಡೆಯುತ್ತದೆ.


ಪ್ರೌಢ ಸ್ಪಂಜು ಪ್ರಾಣಿ ಒಂದು ಕಡೆಯಿಂದ ಮತ್ತೊಂದು ಸ್ಥಳಕ್ಕೆ ಚಲಿಸದು, ಮುಟ್ಟಿದರೂ ಪ್ರತಿಕ್ರಿಯಿಸುವುದಿಲ್ಲ. ಅಂದ್ಹಾಗೆ ಸ್ಪಂಜುಗಳನ್ನು ಮಹಿಳೆಯರ ಆಭರಣ ತಯಾರಿಕೆಯಲ್ಲಿ ಹೆಚ್ಚಾಗಿ ಬಳಸುತ್ತಾರೆ. ಜೊತೆಗೆ ಸ್ಪೋಟಕ ಸಾಮಾಗ್ರಿಗಳ ಸಾಗಾಣಿಕೆಯಲ್ಲಿ, ಚಾಕ್ಷುಷ ಉಪಕರಣಗಳ ತಯಾರಿಕೆಯಲ್ಲಿ, ಕಲಾ ಸಾಮಾಗ್ರಿಗಳ ನವೀಕರಣದಲ್ಲಿ ಬಳಸಲಾಗುವುದರಿಂದ ಇವುಗಳಿಗೆ ಬಹುಬೇಡಿಕೆಯಿದೆ.

ಕಾಮೆಂಟ್‌ಗಳು

ಪ್ರಚಲಿತ ಪೋಸ್ಟ್‌ಗಳು