ವಿಷಯಕ್ಕೆ ಹೋಗಿ

ವೈಶಿಷ್ಟ್ಯವಾಗಿರುವುದು

ಮತ್ತೊಂದು ವಿಶೇಷ ದಾಖಲೆ ಸನಿಹದಲ್ಲಿದ್ದಾರೆ ಕಿಂಗ್ ಕೊಹ್ಲಿ!

ಕ್ರಿಕೆಟ್ ಲೋಕದ ಕಿಂಗ್ ಅಂತಲೇ ಕರೆಯಲ್ಪಡುತ್ತಿರುವ ವಿರಾಟ್ ಕೊಹ್ಲಿ ತನ್ನ ಹೆಸರಿನಲ್ಲಿ ಹಲವಾರು ದಾಖಲೆಗಳನ್ನು ನಿರ್ಮಿಸಿದ್ದಾರೆ. ಅದ್ಯಾವುದೇ ಸರಣಿಯಿರಲಿ, ಪಂದ್ಯವಿರಲಿ; ಕೊಹ್ಲಿ ಹೆಸರಿನಲ್ಲಿ ಒಂದಿಲ್ಲೊಂದು ದಾಖಲೆಗಳು ನಿರ್ಮಾಣವಾಗುತ್ತಲೇಯಿವೆ. ಈಗ ಕೊಹ್ಲಿ ಮತ್ತೊಂದು ವಿಶೇಷ ದಾಖಲೆಗೆ ಬಹಳ ಸನಿಹದಲ್ಲಿದ್ದಾರೆ. ಕಳೆದ ವರ್ಷ ವಿಶ್ವಕಪ್ ವೇಳೆ ಮಾಸ್ಟರ್ ಬ್ಲಾಸ್ಟರ್ ಸಚಿನ್ ತೆಂಡೂಲ್ಕರ್ ಹೆಸರಿನಲ್ಲಿದ್ದ ದಾಖಲೆಯೊಂದನ್ನು ಕೊಹ್ಲಿ ಧೂಳೀಪಟಗೊಳಿಸಿದ್ದರು. ಏಕದಿನ ವಿಶ್ವಕಪ್ ನಲ್ಲಿ 50ನೇ ಶತಕ ಸಿಡಿಸಿದ್ದ ಕೊಹ್ಲಿ, ಸಚಿನ್ ಅವರ ಹೆಸರಿನಲ್ಲಿದ್ದ 49 ಏಕದಿನ ಶತಕಗಳ ದಾಖಲೆಯನ್ನು ಹಿಂದಿಕ್ಕಿದ್ದರು. ಇನ್ನು ಜನವರಿ 25ರಿಂದ ಆರಂಭಗೊಳ್ಳಲಿರುವ ಇಂಗ್ಲೆಂಡ್ ವಿರುದ್ಧದ ಟೆಸ್ಟ್ ಸರಣಿಯ ವೇಳೆ ಮತ್ತೊಂದು ದಾಖಲೆ ನಿರ್ಮಿಸಲು ಕೊಹ್ಲಿ ಮುಂದಾಗಿದ್ದಾರೆ. ಜನವರಿ 25ರಿಂದ ಭಾರತದಲ್ಲಿ ಇಂಗ್ಲೆಂಡ್ ಮತ್ತು ಆತಿಥೇಯ ಭಾರತದ ಮಧ್ಯೆ 5 ಪಂದ್ಯಗಳ ಟೆಸ್ಟ್ ಸರಣಿ ಆರಂಭವಾಗಲಿದೆ. ಈ ಟೆಸ್ಟ್ ಸರಣಿಯ ವೇಳೆ ಕೊಹ್ಲಿಯೇನಾದ್ರೂ 152 ರನ್ ಬಾರಿಸಿದ್ರೆ ಟೆಸ್ಟ್ ವೃತ್ತಿ ಬದುಕಿನಲ್ಲಿ 9,000 ರನ್ ಮೈಲಿಗಲ್ಲು ಸ್ಥಾಪಿಸಿದ ಸಾಧನೆಗೆ ಕಿಂಗ್ ಕೊಹ್ಲಿ ಪಾತ್ರರಾಗಲಿದ್ದಾರೆ. ಸದ್ಯ 113 ಟೆಸ್ಟ್ ಪಂದ್ಯಗಳನ್ನಾಡಿರುವ ಕೊಹ್ಲಿ 30 ಅರ್ಧ ಶತಕ, 29 ಶತಕ ಮತ್ತು 7 ದ್ವಿಶತಕಗಳ ಸಹಿತ ಒಟ್ಟು 8,848 ರನ್ ಬಾರಿಸಿದ್ದಾರೆ. ಅಂದ್ಹಾಗೆ ಭಾರತ ಮತ್ತು ಇಂಗ್ಲೆಂಡ್ ನಡುವಿನ 5 ಪಂದ್ಯಗ...

ಮಾರ್ಷ್-ವಾರ್ನರ್ ಆರ್ಭಟ, ಆಸ್ಟ್ರೇಲಿಯಾ ಮುಡಿಗೆ ಚೊಚ್ಚಲ ಟಿ20 ವಿಶ್ವಕಪ್ ಕಿರೀಟ!

 


ದುಬೈ: ದುಬೈ ಇಂಟರ್ ನ್ಯಾಷನಲ್ ಕ್ರಿಕೆಟ್ ಸ್ಟೇಡಿಯಂನಲ್ಲಿ ನವೆಂಬರ್ 14ರ ಭಾನುವಾರ ನಡೆದ ಟಿ20 ವಿಶ್ವಕಪ್ 2021 ಫೈನಲ್ ಪಂದ್ಯದಲ್ಲಿ ನ್ಯೂಜಿಲೆಂಡ್ ವಿರುದ್ಧ ಆಸ್ಟ್ರೇಲಿಯಾ 8 ವಿಕೆಟ್ ಭರ್ಜರಿ ಜಯ ಗಳಿಸಿದೆ. ಡೇವಿಡ್ ವಾರ್ನರ್ ಮತ್ತು ಮಿಚೆಲ್ ಮಾರ್ಷ್ ಸ್ಫೋಟಕ ಅರ್ಧ ಶತಕದ ನೆರವಿನೊಂದಿಗೆ ಕಾಂಗರೂ ಪಡೆ ಚೊಚ್ಚಲ ಟಿ20 ವಿಶ್ವಕಪ್ ಟ್ರೋಫಿ ಜಯಿಸಿದೆ.

ಟಾಸ್ ಸೋತು ಬ್ಯಾಟಿಂಗ್ ಗೆ ಇಳಿಸಲ್ಪಟ್ಟ ನ್ಯೂಜಿಲೆಂಡ್, ಮಾರ್ಟಿನ್ ಗಪ್ಟಿಲ್ 28, ಡೇರಿ ಮಿಚೆಲ್ 11, ನಾಯಕ ಕೇನ್ ವಿಲಿಯಮ್ಸನ್ 85 (48 ಎಸೆತ), ಗ್ಲೆನ್ ಫಿಲಿಪ್ಸ್ 18, ಜಿಮ್ಮಿ ನೀಶಮ್ 13, ಟಿಮ್ ಸೀಫರ್ಟ್ 8 ರನ್ ನೊಂದಿಗೆ 20 ಓವರ್ ಗೆ 4 ವಿಕೆಟ್ ಕಳೆದು 172 ರನ್ ಗಳಿಸಿತ್ತು.

ಗುರಿ ಬೆನ್ನಟ್ಟಿದ ಆಸ್ಟ್ರೇಲಿಯಾ, ಡೇವಿಡ್ ವಾರ್ನರ್ 53 (38), ಆ್ಯರನ್ ಫಿಂಚ್ 5, ಮಿಚೆಲ್ ಮಾರ್ಷ್ 77 (50), ಗ್ಲೆನ್ ಮ್ಯಾಕ್ಸ್ ವೆಲ್ 28 ರನ್ ನೊಂದಿಗೆ 18.5 ಓವರ್ ಗೆ 2 ವಿಕೆಟ್ ಕಳೆದು 173 ರನ್ ಗಳಿಸುವ ಮೂಲಕ ಜಯದ ಕೇಕೆ ಹಾಕಿತು.

ನ್ಯೂಜಿಲೆಂಡ್ ಇನ್ನಿಂಗ್ಸ್ ನಲ್ಲಿ ಆಸ್ಟ್ರೇಲಿಯಾದ ಜೋಶ್ ಹ್ಯಾಝಲ್ವುಡ್ 3, ಆ್ಯಡಂ ಜಂಪಾ 1 ವಿಕೆಟ್ ಪಡೆದರೆ, ಆಸೀಸ್ ಇನ್ನಿಂಗ್ಸ್ ನಲ್ಲಿ ನ್ಯೂಜಿಲೆಂಡ್ ನ ಟ್ರೆಂಟ್ ಬೌಲ್ಟ್ 2 ವಿಕೆಟ್ ನೊಂದಿಗೆ ಗಮನ ಸೆಳೆದರು.

ಕಾಮೆಂಟ್‌ಗಳು

ಪ್ರಚಲಿತ ಪೋಸ್ಟ್‌ಗಳು