ವಿಷಯಕ್ಕೆ ಹೋಗಿ

ವೈಶಿಷ್ಟ್ಯವಾಗಿರುವುದು

ಮತ್ತೊಂದು ವಿಶೇಷ ದಾಖಲೆ ಸನಿಹದಲ್ಲಿದ್ದಾರೆ ಕಿಂಗ್ ಕೊಹ್ಲಿ!

ಕ್ರಿಕೆಟ್ ಲೋಕದ ಕಿಂಗ್ ಅಂತಲೇ ಕರೆಯಲ್ಪಡುತ್ತಿರುವ ವಿರಾಟ್ ಕೊಹ್ಲಿ ತನ್ನ ಹೆಸರಿನಲ್ಲಿ ಹಲವಾರು ದಾಖಲೆಗಳನ್ನು ನಿರ್ಮಿಸಿದ್ದಾರೆ. ಅದ್ಯಾವುದೇ ಸರಣಿಯಿರಲಿ, ಪಂದ್ಯವಿರಲಿ; ಕೊಹ್ಲಿ ಹೆಸರಿನಲ್ಲಿ ಒಂದಿಲ್ಲೊಂದು ದಾಖಲೆಗಳು ನಿರ್ಮಾಣವಾಗುತ್ತಲೇಯಿವೆ. ಈಗ ಕೊಹ್ಲಿ ಮತ್ತೊಂದು ವಿಶೇಷ ದಾಖಲೆಗೆ ಬಹಳ ಸನಿಹದಲ್ಲಿದ್ದಾರೆ. ಕಳೆದ ವರ್ಷ ವಿಶ್ವಕಪ್ ವೇಳೆ ಮಾಸ್ಟರ್ ಬ್ಲಾಸ್ಟರ್ ಸಚಿನ್ ತೆಂಡೂಲ್ಕರ್ ಹೆಸರಿನಲ್ಲಿದ್ದ ದಾಖಲೆಯೊಂದನ್ನು ಕೊಹ್ಲಿ ಧೂಳೀಪಟಗೊಳಿಸಿದ್ದರು. ಏಕದಿನ ವಿಶ್ವಕಪ್ ನಲ್ಲಿ 50ನೇ ಶತಕ ಸಿಡಿಸಿದ್ದ ಕೊಹ್ಲಿ, ಸಚಿನ್ ಅವರ ಹೆಸರಿನಲ್ಲಿದ್ದ 49 ಏಕದಿನ ಶತಕಗಳ ದಾಖಲೆಯನ್ನು ಹಿಂದಿಕ್ಕಿದ್ದರು. ಇನ್ನು ಜನವರಿ 25ರಿಂದ ಆರಂಭಗೊಳ್ಳಲಿರುವ ಇಂಗ್ಲೆಂಡ್ ವಿರುದ್ಧದ ಟೆಸ್ಟ್ ಸರಣಿಯ ವೇಳೆ ಮತ್ತೊಂದು ದಾಖಲೆ ನಿರ್ಮಿಸಲು ಕೊಹ್ಲಿ ಮುಂದಾಗಿದ್ದಾರೆ. ಜನವರಿ 25ರಿಂದ ಭಾರತದಲ್ಲಿ ಇಂಗ್ಲೆಂಡ್ ಮತ್ತು ಆತಿಥೇಯ ಭಾರತದ ಮಧ್ಯೆ 5 ಪಂದ್ಯಗಳ ಟೆಸ್ಟ್ ಸರಣಿ ಆರಂಭವಾಗಲಿದೆ. ಈ ಟೆಸ್ಟ್ ಸರಣಿಯ ವೇಳೆ ಕೊಹ್ಲಿಯೇನಾದ್ರೂ 152 ರನ್ ಬಾರಿಸಿದ್ರೆ ಟೆಸ್ಟ್ ವೃತ್ತಿ ಬದುಕಿನಲ್ಲಿ 9,000 ರನ್ ಮೈಲಿಗಲ್ಲು ಸ್ಥಾಪಿಸಿದ ಸಾಧನೆಗೆ ಕಿಂಗ್ ಕೊಹ್ಲಿ ಪಾತ್ರರಾಗಲಿದ್ದಾರೆ. ಸದ್ಯ 113 ಟೆಸ್ಟ್ ಪಂದ್ಯಗಳನ್ನಾಡಿರುವ ಕೊಹ್ಲಿ 30 ಅರ್ಧ ಶತಕ, 29 ಶತಕ ಮತ್ತು 7 ದ್ವಿಶತಕಗಳ ಸಹಿತ ಒಟ್ಟು 8,848 ರನ್ ಬಾರಿಸಿದ್ದಾರೆ. ಅಂದ್ಹಾಗೆ ಭಾರತ ಮತ್ತು ಇಂಗ್ಲೆಂಡ್ ನಡುವಿನ 5 ಪಂದ್ಯಗ...

ಕರ್ನಾಟಕ ಸರ್ಕಾರದಿಂದ ಇತ್ತೀಚೆಗೆ ಕರೆಯಲಾದ ವಿವಿಧ ಹುದ್ದೆಗಳ ಮಾಹಿತಿ


ಕರ್ನಾಟಕದಿಂದ ಮಾನ್ಯತೆ ಪಡೆದ ವಿವಿಧ ಸಂಸ್ಥೆಗಳಿಂದ ಕರೆಯಲಾದ ಸರ್ಕಾರಿ ಉದ್ಯೋಗಗಳ ಮಾಹಿತಿ ಇಲ್ಲಿದೆ. ಹೆಚ್ಚಿನ ಮಾಹಿತಿಗೆ ಆಯಾ ಸಂಸ್ಥೆಗಳ ವೆಬ್ ಸೈಟ್ ಗೆ ಭೇಟಿ ನೀಡಿ ಮಾಹಿತಿ ಪಡೆಯಿರಿ. ನಿಮಗೆ ಅನುಕೂಲವಾಗಲಿ ಎಂದು ಆಯಾ ಉದ್ಯೋಗಕ್ಕೆ ಸಂಬಂಧಿಸಿದ ಹೆಚ್ಚಿನ ಮಾಹಿತಿಯಿರುವ ಪಿಡಿಎಫ್ ಲಿಂಕ್ ಕೂಡ ಇಲ್ಲಿ ಕೊಟ್ಟಿದ್ದೇವೆ.

1. ಬಿಇಎಲ್
ಭಾರತ್ ಎಲೆಕ್ಟ್ರಾನಿಕ್ಸ್ ಲಿಮಿಟೆಡ್ (ಬಿಇಎಲ್) ಪ್ರೋಜೆಕ್ಟ್ ಇಂಜಿನಿಯರ್ ಗಳಿಗಾಗಿ ಅರ್ಜಿ ಕರೆದಿದೆ. 10 ಪೋಸ್ಟ್ ಗಳಿಗೆ ಅರ್ಜಿ ಕರೆಯಲಾಗಿದೆ. B.E/ B.Tech/ B.Sc (ತತ್ಸಮಾನ) ವಿದ್ಯಾರ್ಹತೆ ಇರುವವರು ಅರ್ಜಿ ಸಲ್ಲಿಸಬಹುದು. ಕೊನೇ ದಿನಾಂಕ 06.01.2022.
ಹೆಚ್ಚಿನ ಮಾಹಿತಿಗಾಗಿ ಇಲ್ಲಿ ಕ್ಲಿಕ್ ಮಾಡಿ: ಪಿಡಿಎಫ್

2. ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ದಾವಣಗೆರೆ
ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ದಾವಣಗೆರೆ ವಿವಿಧ ಹುದ್ದೆಗಳಿಗಾಗಿ ಅರ್ಜಿ ಕರೆದಿದೆ. 05 ಶಿಶು ಅಭಿವೃದ್ಧಿ ಯೋಜನೆಯಲ್ಲಿ ಬರುವ ಅಂಗನವಾಡಿ ಕೇಂದ್ರಗಳಲ್ಲಿ ಖಾಲಿಯಿರುವ 19 ಅಂಗನವಾಡಿ ಕಾರ್ಯಕರ್ತೆ ಮತ್ತು 101 ಅಂಗನವಾಡಿ ಸಹಾಯಕಿಯರ ಗೌರವ ಸೇವೆಯ ಹುದ್ದೆಗಳಿಗೆ ಅರ್ಹ ಮಹಿಳಾ ಅಭ್ಯರ್ಥಿಗಳಿಂದ ಅರ್ಜಿ ಕರೆಯಲಾಗಿದೆ. 4ನೇ, 9ನೇ ಮತ್ತು 10ನೇ ತರಗತಿ ಓದಿರುವವರು ಇದಕ್ಕೆ ಅರ್ಜಿ ಸಲ್ಲಿಸಬಹುದು.
ಕೊನೇ ದಿನಾಂಕ 18.01.2022.
ಹೆಚ್ಚಿನ ಮಾಹಿತಿಗಾಗಿ ಇಲ್ಲಿ ಕ್ಲಿಕ್ ಮಾಡಿ: ಪಿಡಿಎಫ್

3. ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆ
ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯಿಂದ 70 ಸ್ಪೆಶಲ್ ರಿಸರ್ವ್ಡ್ ಸಬ್ ಇನ್ಸ್ ಪೆಕ್ಟರ್ ಹುದ್ದೆಗಳಿಗೆ ಅರ್ಜಿ ಕರೆಯಲಾಗಿದೆ. ಯಾವುದೇ ಪದವಿ ವಿದ್ಯಾಭ್ಯಾಸ ಮುಗಿಸಿದವರು ಈ ಹುದ್ದೆಗೆ ಅರ್ಜಿ ಸಲ್ಲಿಸಬಹುದು. 
ಕೊನೇ ದಿನಾಂಕ: 18.01.2022.
ಹೆಚ್ಚಿನ ಮಾಹಿತಿಗಾಗಿ ಇಲ್ಲಿ ಕ್ಲಿಕ್ ಮಾಡಿ: ಪಿಡಿಎಫ್

4. ವಿಜಯಪುರ ಮತ್ತು ಬಾಗಲಕೋಟೆ ಜಿಲ್ಲಾ ಸಹಕಾರ ಹಾಲು ಉತ್ಪಾದಕರ ಒಕ್ಕೂಟ
ವಿಜಯಪುರ ಮತ್ತು ಬಾಗಲಕೋಟೆ ಜಿಲ್ಲಾ ಸಹಕಾರ ಹಾಲು ಉತ್ಪಾದಕರ ಒಕ್ಕೂಟದಿಂದ ವಿವಿಧ ಹುದ್ದೆಗಳಿಗೆ ಅರ್ಜಿ ಕರೆಯಲಾಗಿದೆ. ಎ.ಎಸ್.ಎಲ್.ಸಿ, ಐಟಿಐ, ಪದವಿ ಮತ್ತು ತತ್ಸಮಾನ ವಿದ್ಯಾಭ್ಯಾಸ ಮಾಡಿರುವವರು ಅರ್ಜಿ ಸಲ್ಲಿಸಬಹುದು. 
ಕೊನೇ ದಿನಾಂಕ: 20.02.2022.
ಹೆಚ್ಚಿನ ಮಾಹಿತಿಗಾಗಿ ಇಲ್ಲಿ ಕ್ಲಿಕ್ ಮಾಡಿ: ಪಿಡಿಎಫ್

5. ಮಾನವ ಸಂಪನ್ಮೂಲ ವಿಭಾಗ, ಭಾರತೀಯ ವಿಜ್ಞಾನ ಸಂಸ್ಥೆ ಬೆಂಗಳೂರು
ಮಾನವ ಸಂಪನ್ಮೂಲ ವಿಭಾಗ, ಭಾರತೀಯ ವಿಜ್ಞಾನ ಸಂಸ್ಥೆ ಬೆಂಗಳೂರಿನಿಂದ ಸಿಸ್ಟಮ್ ಇಂಜಿನಿಯರ್, ಸೀನಿಯರ್ ಸಿಸ್ಟಮ್ ಇಂಜಿನಿಯರ್ ಹುದ್ದೆಗಳಿಗೆ ಅರ್ಜಿ ಕರೆಯಲಾಗಿದೆ. BE/ B.Tech/ ME/ MCA/ M.Sc ಮಾಡಿರುವವರು ಈ ಹುದ್ದೆಗೆ ಅರ್ಜಿ ಸಲ್ಲಿಸಬಹುದು. 
ಕೊನೇ ದಿನಾಂಕ: 04.01.2022.
ಹೆಚ್ಚಿನ ಮಾಹಿತಿಗಾಗಿ ಇಲ್ಲಿ ಕ್ಲಿಕ್ ಮಾಡಿ: ಪಿಡಿಎಫ್

ಕಾಮೆಂಟ್‌ಗಳು

ಕಾಮೆಂಟ್‌‌ ಪೋಸ್ಟ್‌ ಮಾಡಿ

ಪ್ರಚಲಿತ ಪೋಸ್ಟ್‌ಗಳು