ವಿಷಯಕ್ಕೆ ಹೋಗಿ

ವೈಶಿಷ್ಟ್ಯವಾಗಿರುವುದು

ಮತ್ತೊಂದು ವಿಶೇಷ ದಾಖಲೆ ಸನಿಹದಲ್ಲಿದ್ದಾರೆ ಕಿಂಗ್ ಕೊಹ್ಲಿ!

ಕ್ರಿಕೆಟ್ ಲೋಕದ ಕಿಂಗ್ ಅಂತಲೇ ಕರೆಯಲ್ಪಡುತ್ತಿರುವ ವಿರಾಟ್ ಕೊಹ್ಲಿ ತನ್ನ ಹೆಸರಿನಲ್ಲಿ ಹಲವಾರು ದಾಖಲೆಗಳನ್ನು ನಿರ್ಮಿಸಿದ್ದಾರೆ. ಅದ್ಯಾವುದೇ ಸರಣಿಯಿರಲಿ, ಪಂದ್ಯವಿರಲಿ; ಕೊಹ್ಲಿ ಹೆಸರಿನಲ್ಲಿ ಒಂದಿಲ್ಲೊಂದು ದಾಖಲೆಗಳು ನಿರ್ಮಾಣವಾಗುತ್ತಲೇಯಿವೆ. ಈಗ ಕೊಹ್ಲಿ ಮತ್ತೊಂದು ವಿಶೇಷ ದಾಖಲೆಗೆ ಬಹಳ ಸನಿಹದಲ್ಲಿದ್ದಾರೆ. ಕಳೆದ ವರ್ಷ ವಿಶ್ವಕಪ್ ವೇಳೆ ಮಾಸ್ಟರ್ ಬ್ಲಾಸ್ಟರ್ ಸಚಿನ್ ತೆಂಡೂಲ್ಕರ್ ಹೆಸರಿನಲ್ಲಿದ್ದ ದಾಖಲೆಯೊಂದನ್ನು ಕೊಹ್ಲಿ ಧೂಳೀಪಟಗೊಳಿಸಿದ್ದರು. ಏಕದಿನ ವಿಶ್ವಕಪ್ ನಲ್ಲಿ 50ನೇ ಶತಕ ಸಿಡಿಸಿದ್ದ ಕೊಹ್ಲಿ, ಸಚಿನ್ ಅವರ ಹೆಸರಿನಲ್ಲಿದ್ದ 49 ಏಕದಿನ ಶತಕಗಳ ದಾಖಲೆಯನ್ನು ಹಿಂದಿಕ್ಕಿದ್ದರು. ಇನ್ನು ಜನವರಿ 25ರಿಂದ ಆರಂಭಗೊಳ್ಳಲಿರುವ ಇಂಗ್ಲೆಂಡ್ ವಿರುದ್ಧದ ಟೆಸ್ಟ್ ಸರಣಿಯ ವೇಳೆ ಮತ್ತೊಂದು ದಾಖಲೆ ನಿರ್ಮಿಸಲು ಕೊಹ್ಲಿ ಮುಂದಾಗಿದ್ದಾರೆ. ಜನವರಿ 25ರಿಂದ ಭಾರತದಲ್ಲಿ ಇಂಗ್ಲೆಂಡ್ ಮತ್ತು ಆತಿಥೇಯ ಭಾರತದ ಮಧ್ಯೆ 5 ಪಂದ್ಯಗಳ ಟೆಸ್ಟ್ ಸರಣಿ ಆರಂಭವಾಗಲಿದೆ. ಈ ಟೆಸ್ಟ್ ಸರಣಿಯ ವೇಳೆ ಕೊಹ್ಲಿಯೇನಾದ್ರೂ 152 ರನ್ ಬಾರಿಸಿದ್ರೆ ಟೆಸ್ಟ್ ವೃತ್ತಿ ಬದುಕಿನಲ್ಲಿ 9,000 ರನ್ ಮೈಲಿಗಲ್ಲು ಸ್ಥಾಪಿಸಿದ ಸಾಧನೆಗೆ ಕಿಂಗ್ ಕೊಹ್ಲಿ ಪಾತ್ರರಾಗಲಿದ್ದಾರೆ. ಸದ್ಯ 113 ಟೆಸ್ಟ್ ಪಂದ್ಯಗಳನ್ನಾಡಿರುವ ಕೊಹ್ಲಿ 30 ಅರ್ಧ ಶತಕ, 29 ಶತಕ ಮತ್ತು 7 ದ್ವಿಶತಕಗಳ ಸಹಿತ ಒಟ್ಟು 8,848 ರನ್ ಬಾರಿಸಿದ್ದಾರೆ. ಅಂದ್ಹಾಗೆ ಭಾರತ ಮತ್ತು ಇಂಗ್ಲೆಂಡ್ ನಡುವಿನ 5 ಪಂದ್ಯಗ...

ಐಪಿಎಲ್ 2022 ಹರಾಜಿಗೂ ಮುನ್ನ ಶೂಟಿಂಗ್, ಟೆನಿಸ್ ಅಭ್ಯಾಸ ಮಾಡಿದ ಎಂಎಸ್ ಧೋನಿ: ವೀಡಿಯೋ

ಫೆಬ್ರವರಿ 12 ಮತ್ತು 13ರಂದು ಬೆಂಗಳೂರಿನಲ್ಲಿ 2022ರ ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್)ಗೆ ಆಟಗಾರರ ಹರಾಜು ಪ್ರಕ್ರಿಯೆ ನಡೆಯಲಿದೆ. ಮಾಜಿ ಚಾಂಪಿಯನ್ಸ್ ಚೆನ್ನೈ ಸೂಪರ್ ಕಿಂಗ್ಸ್ (ಸಿಎಸ್ಕೆ) ಈ ಸೀಸನ್ ನಲ್ಲಿ ಉತ್ತಮ ಪ್ರದರ್ಶನ ನೀಡಲು ಮತ್ತು ಮೆಗಾ ಆಕ್ಷನ್ ನಲ್ಲಿ ತಂಡ ಬಲಿಷ್ಠಗೊಳಿಸಿಕೊಳ್ಳಲು ಸಜ್ಜಾಗಿದೆ. 

ಸಿಎಸ್ಕೆ ನಾಯಕ ಎಂಎಸ್ ಧೋನಿ ಹರಾಜು ಪ್ರಕ್ರಿಯೆಗೂ ಮುನ್ನ ಶೂಟಿಂಗ್ ಮತ್ತು ಟೆನಿಸ್ ಅಭ್ಯಾಸ ಮಾಡಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಓಡಾಡುತ್ತಿದೆ. ಕ್ರಿಕೆಟರ್ ಧೋನಿ ಆಟಗಾರರ ಹರಾಜಿಗೂ ಮುನ್ನ ಮನಸ್ಸು ನಿರಾಳತೆಗಾಗಿ ಶೂಟಿಂಗ್, ಟೆನಿಸ್ ಅಭ್ಯಾಸದ ಮೊರೆ ಹೋಗಿದ್ದಾರೆ.

ಸಿಎಸ್ಕೆ ಈಗಾಗಲೇ ಈ ಬಾರಿಯ ಆಟಗಾರರ ಹರಾಜಿಗೂ ಮುನ್ನ ತಮ್ಮ ತಂಡದಲ್ಲಿ ಉಳಿಸಿಕೊಳ್ಳುವ ಆಟಗಾರರ ಪಟ್ಟಿ ಪ್ರಕಟಿಸಿದೆ. ನಾಯಕ ಧೋನಿ, ಆಲ್ ರೌಂಡರ್ ರವೀಂದ್ರ ಜಡೇಜಾ, ಮೊಯೀನ್ ಅಲಿ ಮತ್ತು ಆರಂಭಿಕ ಬ್ಯಾಟ್ಸ್ ಮನ್ ಋತುರಾಜ್ ಗಾಯಕ್ವಾಡ್ ಅವರನ್ನು ಸಿಎಸ್ಕೆ ಉಳಿಸಿಕೊಂಡಿದೆ. ಸಿಎಸ್ಕೆ ತಂಡ ಐಪಿಎಲ್ ನಲ್ಲಿ ಒಟ್ಟು ನಾಲ್ಕು ಬಾರಿ ಟ್ರೋಫಿ ಜಯಿಸಿದೆ.

ಆಟಗಾರರ ಹರಾಜಿನ ವೇಳೆ ಎಂಥ ಆಟಗಾರರನ್ನು ಆರಿಸಬೇಕು, ಯಾವ ವಿಭಾಗಕ್ಕೆ ಹೆಚ್ಚು ಪ್ರಾಶಸ್ತ್ಯತೆ ನೀಡಬೇಕು ಎನ್ನುವ ಬಗ್ಗೆ ಧೋನಿ ತಮ್ಮ ತಂಡ ನಿರ್ವಹಣಾ ಸಮಿತಿಗೆ ಅಭಿಪ್ರಾಯ ತಿಳಿಸಿದ್ದಾರೆ. ಹರಾಜು ವಿಚಾರವಾಗಿ ಧೋನಿ ಕೆಲ ದಿನಗಳಿಗೆ ಮುಂಚೆಯೇ ಚೆನ್ನೈಗೆ ಬಂದಿಳಿದಿದ್ದಾರೆ ಎಂದು ಮೂಲದಿಂದ ತಿಳಿದು ಬಂದಿದೆ.


ಕಾಮೆಂಟ್‌ಗಳು

ಕಾಮೆಂಟ್‌‌ ಪೋಸ್ಟ್‌ ಮಾಡಿ

ಪ್ರಚಲಿತ ಪೋಸ್ಟ್‌ಗಳು