ವಿಷಯಕ್ಕೆ ಹೋಗಿ

ವೈಶಿಷ್ಟ್ಯವಾಗಿರುವುದು

ಮತ್ತೊಂದು ವಿಶೇಷ ದಾಖಲೆ ಸನಿಹದಲ್ಲಿದ್ದಾರೆ ಕಿಂಗ್ ಕೊಹ್ಲಿ!

ಕ್ರಿಕೆಟ್ ಲೋಕದ ಕಿಂಗ್ ಅಂತಲೇ ಕರೆಯಲ್ಪಡುತ್ತಿರುವ ವಿರಾಟ್ ಕೊಹ್ಲಿ ತನ್ನ ಹೆಸರಿನಲ್ಲಿ ಹಲವಾರು ದಾಖಲೆಗಳನ್ನು ನಿರ್ಮಿಸಿದ್ದಾರೆ. ಅದ್ಯಾವುದೇ ಸರಣಿಯಿರಲಿ, ಪಂದ್ಯವಿರಲಿ; ಕೊಹ್ಲಿ ಹೆಸರಿನಲ್ಲಿ ಒಂದಿಲ್ಲೊಂದು ದಾಖಲೆಗಳು ನಿರ್ಮಾಣವಾಗುತ್ತಲೇಯಿವೆ. ಈಗ ಕೊಹ್ಲಿ ಮತ್ತೊಂದು ವಿಶೇಷ ದಾಖಲೆಗೆ ಬಹಳ ಸನಿಹದಲ್ಲಿದ್ದಾರೆ. ಕಳೆದ ವರ್ಷ ವಿಶ್ವಕಪ್ ವೇಳೆ ಮಾಸ್ಟರ್ ಬ್ಲಾಸ್ಟರ್ ಸಚಿನ್ ತೆಂಡೂಲ್ಕರ್ ಹೆಸರಿನಲ್ಲಿದ್ದ ದಾಖಲೆಯೊಂದನ್ನು ಕೊಹ್ಲಿ ಧೂಳೀಪಟಗೊಳಿಸಿದ್ದರು. ಏಕದಿನ ವಿಶ್ವಕಪ್ ನಲ್ಲಿ 50ನೇ ಶತಕ ಸಿಡಿಸಿದ್ದ ಕೊಹ್ಲಿ, ಸಚಿನ್ ಅವರ ಹೆಸರಿನಲ್ಲಿದ್ದ 49 ಏಕದಿನ ಶತಕಗಳ ದಾಖಲೆಯನ್ನು ಹಿಂದಿಕ್ಕಿದ್ದರು. ಇನ್ನು ಜನವರಿ 25ರಿಂದ ಆರಂಭಗೊಳ್ಳಲಿರುವ ಇಂಗ್ಲೆಂಡ್ ವಿರುದ್ಧದ ಟೆಸ್ಟ್ ಸರಣಿಯ ವೇಳೆ ಮತ್ತೊಂದು ದಾಖಲೆ ನಿರ್ಮಿಸಲು ಕೊಹ್ಲಿ ಮುಂದಾಗಿದ್ದಾರೆ. ಜನವರಿ 25ರಿಂದ ಭಾರತದಲ್ಲಿ ಇಂಗ್ಲೆಂಡ್ ಮತ್ತು ಆತಿಥೇಯ ಭಾರತದ ಮಧ್ಯೆ 5 ಪಂದ್ಯಗಳ ಟೆಸ್ಟ್ ಸರಣಿ ಆರಂಭವಾಗಲಿದೆ. ಈ ಟೆಸ್ಟ್ ಸರಣಿಯ ವೇಳೆ ಕೊಹ್ಲಿಯೇನಾದ್ರೂ 152 ರನ್ ಬಾರಿಸಿದ್ರೆ ಟೆಸ್ಟ್ ವೃತ್ತಿ ಬದುಕಿನಲ್ಲಿ 9,000 ರನ್ ಮೈಲಿಗಲ್ಲು ಸ್ಥಾಪಿಸಿದ ಸಾಧನೆಗೆ ಕಿಂಗ್ ಕೊಹ್ಲಿ ಪಾತ್ರರಾಗಲಿದ್ದಾರೆ. ಸದ್ಯ 113 ಟೆಸ್ಟ್ ಪಂದ್ಯಗಳನ್ನಾಡಿರುವ ಕೊಹ್ಲಿ 30 ಅರ್ಧ ಶತಕ, 29 ಶತಕ ಮತ್ತು 7 ದ್ವಿಶತಕಗಳ ಸಹಿತ ಒಟ್ಟು 8,848 ರನ್ ಬಾರಿಸಿದ್ದಾರೆ. ಅಂದ್ಹಾಗೆ ಭಾರತ ಮತ್ತು ಇಂಗ್ಲೆಂಡ್ ನಡುವಿನ 5 ಪಂದ್ಯಗ...

ಸಚಿನ್ ತೆಂಡೂಲ್ಕರ್ ದಾಖಲೆ ಧೂಳೀಪಟ ಮಾಡಿದ ರೋಹಿತ್ ಶರ್ಮಾ!

ಅಫ್ಘಾನಿಸ್ತಾನ ವಿರುದ್ಧದ ವಿಶ್ವಕಪ್ ಪಂದ್ಯದಲ್ಲಿ ಟೀಮ್ ಇಂಡಿಯಾ 8 ವಿಕೆಟ್ ಗಳ ಸುಲಭ ಜಯ ಗಳಿಸಿದೆ. ಈ ಪಂದ್ಯದಲ್ಲಿ ಭಾರತದ ನಾಯಕ ರೋಹಿತ್ ಶರ್ಮಾ ಕೇವಲ 84 ಬಾಲ್ ಗಳಲ್ಲಿ 16 ಬೌಂಡರಿ, 5 ಸಿಕ್ಸರ್ ಗಳ ಸಹಿತ 131 ರನ್ ಸಿಡಿಸಿ ಮಿಂಚಿದ್ರು. 

ಇದು ಹಿಟ್ ಮ್ಯಾನ್ ರೋಹಿತ್, ಏಕದಿನ ಕ್ರಿಕೆಟ್ ನಲ್ಲಿ ಬಾರಿಸಿದ 31ನೇ ಶತಕ. ಇದರ ಜೊತೆಗೆ ಕ್ರಿಕೆಟ್ ದಿಗ್ಗಜ ಸಚಿನ್ ತೆಂಡೂಲ್ಕರ್ ಹೆಸರಿನಲ್ಲಿದ್ದ ದಾಖಲೆಯೊಂದನ್ನು ರೋಹಿತ್ ಧೂಳೀಪಟಗೊಳಿಸಿದ್ದಾರೆ. ಏಕದಿನ ವಿಶ್ವಕಪ್ ನಲ್ಲಿ ಅತೀ ಹೆಚ್ಚು ಶತಕಗಳನ್ನು ಬಾರಿಸಿದ ದಾಖಲೆಪಟ್ಟಿಯಲ್ಲಿ ರೋಹಿತ್, ಮಾಸ್ಟರ್ ಬ್ಲಾಸ್ಟರ್ ಸಚಿನ್ ದಾಖಲೆಯನ್ನು ಮೀರಿಸಿದ್ದಾರೆ.

ಏಕದಿನ ವಿಶ್ವಕಪ್ ನಲ್ಲಿ ಅತೀ ಹೆಚ್ಚು ಶತಕಗಳನ್ನು ಬಾರಿಸಿದ ದಾಖಲೆ ಪಟ್ಟಿಯಲ್ಲಿ ಮೊದಲ ಸ್ಥಾನದಲ್ಲಿದ್ದ ಸಚಿನ್ ತೆಂಡೂಲ್ಕರ್ 6 ಶತಕಗಳನ್ನು ಬಾರಿಸಿದ್ರು. ಇನ್ನು ಶ್ರೀಲಂಕಾದ ಕುಮಾರ ಸಂಗಕ್ಕಾರ ಮತ್ತು ಆಸ್ಟ್ರೇಲಿಯಾದ ರಿಕಿ ಪಾಂಟಿಂಗ್ ತಲಾ 5 ಶತಕಗಳನ್ನು ಬಾರಿಸಿದ್ರು.

ಆದ್ರೆ ಅಫ್ಘಾನಿಸ್ತಾನ ವಿರುದ್ಧದ ಶತಕ ಸೇರಿ ಒಡಿಐ ವಿಶ್ವಕಪ್ ಕ್ರಿಕೆಟ್ ನಲ್ಲಿ ಒಟ್ಟಾರೆ 7 ಶತಕಗಳನ್ನು ಬಾರಿಸಿರುವ ರೋಹಿತ್, ಸಚಿನ್ ಬಾರಿಸಿದ್ದ 6 ಶತಕಗಳ ದಾಖಲೆಯನ್ನು ಹಿಂದಿಕ್ಕಿದ್ದಾರೆ. ಸಚಿನ್ 6 ಶತಕಗಳನ್ನು ಬಾರಿಸಲು 44 ಇನ್ನಿಂಗ್ಸ್ ಬಳಸಿಕೊಂಡಿದ್ರೆ, ರೋಹಿತ್ ಕೇವಲ 19 ಇನ್ನಿಂಗ್ಸ್ ನಲ್ಲಿ 7 ಶತಕಗಳನ್ನು ಸಿಡಿಸಿದ್ದಾರೆ.


ಕಾಮೆಂಟ್‌ಗಳು

ಪ್ರಚಲಿತ ಪೋಸ್ಟ್‌ಗಳು