ವೈಶಿಷ್ಟ್ಯವಾಗಿರುವುದು
- ಲಿಂಕ್ ಪಡೆಯಿರಿ
- X
- ಇಮೇಲ್
- ಇತರ ಅಪ್ಲಿಕೇಶನ್ಗಳು
ಸಚಿನ್ ಹೆಸರಿನಲ್ಲಿದ್ದ ಮತ್ತೊಂದು ದಾಖಲೆ ಪುಡಿಗಟ್ಟಿದ ಕಿಂಗ್ ಕೊಹ್ಲಿ!
ಕ್ರಿಕೆಟ್ ಕಿಂಗ್ ವಿರಾಟ್ ಕೊಹ್ಲಿ ಬ್ಯಾಟ್ ಹಿಡಿದು ಮೈದಾನಕ್ಕಿಳಿದ್ರೆ ಸಾಕು; ಸಾಲು ಸಾಲು ದಾಖಲೆಗಳು ಸೃಷ್ಟಿಯಾಗಿಬಿಡುತ್ತೆ. ಈ ಬಾರಿಯ ವಿಶ್ವಕಪ್ ನಲ್ಲಿ ಶ್ರೀಲಂಕಾ ವಿರುದ್ಧದ ಪಂದ್ಯದಲ್ಲಿ ಕೊಹ್ಲಿ ಮತ್ತೊಂದು ದಾಖಲೆ ನಿರ್ಮಿಸಿದ್ದಾರೆ. ಅದೂ ಕೂಡ ಕ್ರಿಕೆಟ್ ದೇವರು ಸಚಿನ್ ತೆಂಡೂಲ್ಕರ್ ಹೆಸರಿನಲ್ಲಿದ್ದ ಮತ್ತೊಂದು ದಾಖಲೆಯನ್ನು ಪುಡಿಗಟ್ಟಿದ್ದಾರೆ!
ಮುಂಬೈಯ ವಾಂಖೆಡೆ ಸ್ಟೇಡಿಯಂನಲ್ಲಿ ನಡೆದಿದ್ದ ವಿಶ್ವಕಪ್ 33ನೇ ಪಂದ್ಯದಲ್ಲಿ ಶ್ರೀಲಂಕಾ ವಿರುದ್ಧ ವಿರಾಟ್ ಕೊಹ್ಲಿ 94 ಬಾಲ್ ಗಳಲ್ಲಿ 11 ಬೌಂಡರಿಗಳ ಸಹಿತ 88 ರನ್ ಸಿಡಿಸಿದ್ರು. ಈ ಮೂಲಕ ಸಚಿನ್ ತೆಂಡೂಲ್ಕರ್ ಹೆಸರಿನಲ್ಲಿದ್ದ ದಾಖಲೆಯೊಂದು ಬದಿಗೆ ಸರಿದಿದೆ.
ಶ್ರೀಲಂಕಾ ವಿರುದ್ಧದ ಪಂದ್ಯದ ಮೂಲಕ ವಿರಾಟ್, ಕ್ಯಾಲೆಂಡರ್ ವರ್ಷವೊಂದರಲ್ಲಿ 8ನೇ ಬಾರಿಗೆ ಏಕದಿನ 1,000 ರನ್ ಪೂರೈಸಿದ ಸಾಧನೆ ಮಾಡಿದ್ರು. ಇದರೊಂದಿಗೆ ಸಚಿನ್ ಸಾಧನೆ ಮೀರಿಸಿದಂತಾಗಿದೆ. ಯಾಕಂದ್ರೆ ಸಚಿನ್, ತನ್ನ ವೃತ್ತಿ ಜೀವನದಲ್ಲಿ ಕ್ಯಾಲೆಂಡರ್ ವರ್ಷವೊಂದರಲ್ಲಿ 7 ಬಾರಿ ಏಕದಿನ ಕ್ರಿಕೆಟ್ ನಲ್ಲಿ 1,000 ರನ್ ಪೂರೈಸಿದ ಸಾಧನೆ ಮಾಡಿದ್ರು.
ಅಂತಾರಾಷ್ಟ್ರೀಯ ಕ್ರಿಕೆಟ್ ನಲ್ಲಿ ಸಚಿನ್ ಶತಕದ ಶತಕ ಬಾರಿಸಿದ ವಿಶ್ವದಾಖಲೆ ಹೊಂದಿದ್ದಾರೆ. ಆದ್ರೆ ಈಗಾಗ್ಲೇ 78 ಅಂತಾರಾಷ್ಟ್ರೀಯ ಶತಕಗಳನ್ನು ಬಾರಿಸಿರುವ ಕೊಹ್ಲಿ, ಇನ್ನು 22 ಶತಕಗಳನ್ನು ಬಾರಿಸಿದ್ರೆ ಸಚಿನ್ ದಾಖಲೆ ಸರಿದೂಗಿಸಿದಂತಾಗಲಿದೆ.
ಅಂದ್ಹಾಗೆ ಪಂದ್ಯದಲ್ಲಿ ಶ್ರೀಲಂಕಾವನ್ನು ಟೀಮ್ ಇಂಡಿಯಾ ಭರ್ಜರಿ 302 ರನ್ ಗಳಿಂದ ಸೋಲಿಸಿದೆ. ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ್ದ ಭಾರತ, 50 ಓವರ್ ಗಳಲ್ಲಿ 8 ವಿಕೆಟ್ ನಷ್ಟಕ್ಕೆ 357 ರನ್ ಗಳಿಸಿದ್ರೆ, ಗುರಿ ಬೆನ್ನಟ್ಟಿದ ಶ್ರೀಲಂಕಾ, 19.4 ಓವರ್ ಗಳಲ್ಲಿ ಕೇವಲ 55 ರನ್ ಬಾರಿಸಿ ಆಲ್ ಔಟ್ ಆಯ್ತು.
- ಲಿಂಕ್ ಪಡೆಯಿರಿ
- X
- ಇಮೇಲ್
- ಇತರ ಅಪ್ಲಿಕೇಶನ್ಗಳು

ಕಾಮೆಂಟ್‌ಗಳು
ಕಾಮೆಂಟ್ ಪೋಸ್ಟ್ ಮಾಡಿ